ಕರ್ನಾಟಕ

ಆನ್‌ಲೈನ್ ಜೂಜು ನಿಷೇಧ ವಿಚಾರ- ರಾಜ್ಯ ಸರಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

Pinterest LinkedIn Tumblr

ಬೆಂಗಳೂರು: ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ದೂರು (ಪಿಐಎಲ್) ಸಲ್ಲಿಕೆಯಾಗಿದ್ದು ಜನವರಿ 12ರೊಳಗೆ ಈ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸಿಟಿಜನ್ ಪೋರಂ ಅಗೈನೆಸ್ಟ್ ಆನ್ ಲೈನ್ ಗ್ಯಾಂಬ್ಲಿಂಗ್ ಸಂಘಟನೆಯ ಡಿ. ಶಾರದಾ ಎನ್ನುವರು ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು ಆನ್‌ಲೈನ್ ಜೂಜು, ಬೆಟ್ಟಿಂಗ್ ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಇದನ್ನು ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀರ ಅರ್ಜಿಯ ವಿಚಾರಣೆ ನಡೆಸಿ‌ ಜ.12ರೊಳಗೆ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನೋಟಿಸ್ ನೀಡಿದೆ.

ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳ ಹೈಕೋರ್ಟ್ ಆನ್‌ಲೈನ್ ಜೂಜು ನಿಯಂತ್ರಿಸಲು ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ಕೊಟ್ಟಿವೆ. ಕರ್ನಾಟಕದಲ್ಲಿ ಇದರ ನಿಯಂತ್ರಣಕ್ಕೆ ಮಾರ್ಗಸೂಚಿಗಳಿಲ್ಲ. ಆನ್‌ಲೈನ್ ಜೂಜಾಟದಲ್ಲಿ ಮೋಸ ಹೋಗಿ ಹಲವರು ಜೀವ ಕಳೆದುಕೊಂಡಿದ್ದಾರೆಂದು ನ್ಯಾಯಾಲಯಕ್ಕೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Comments are closed.