ಕರ್ನಾಟಕ

ಸಾರಿಗೆ ನೌಕರರ ಮುಷ್ಕರ; ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ

Pinterest LinkedIn Tumblr


ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇಂದು ಕೂಡ ಮುಷ್ಕರ ಮುಂದುವರೆಸಲು ತೀರ್ಮಾನಿಸಿದ್ದಾರೆ.

ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ಬೇಡಿಕೆಯನ್ನು ಪರಿಶೀಲನೆ ಮಾಡಲು ಸಮಯ ಹಿಡಿಯುತ್ತದೆ. ಅವರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದರ ಜೊತೆಗೆ ಹಿಂದಿನ ಸಾಧಕ ಭಾಧಕಗಳನ್ನು ಕಾರ್ಮಿಕರು ಮೊದಲು ಪರಿಶೀಲಿಸಬೇಕು, ನಾವು ಮಾತುಕತೆಗೆ ಸಿದ್ದರಿದ್ದೇವೆ ಎಂದು ಸರ್ಕಾರ ಹೇಳಿದೆ.

ಈ ಬಗ್ಗೆ ಎರಡನೇ ಸುತ್ತಿನ ಮಾತುಕತೆ ನಡೆಸಿದ ಸಾರಿಗೆ ನೌಕರರ ಸಂಘಗಳು ನಾಳೆ ಕೂಡ ಸಭೆ ಮುಂದುವರೆಸಲು ನಿರ್ಧರಿಸಿದೆ.ಈ ಹಿನ್ನೆಲೆ ನಾಳೆ ಕೂಡ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ದೂರದ ಊರಿಗೆ ಪ್ರಯಾಣಿಸಲು ಖಾಸಗಿ ವಾಹನಗಳನ್ನು ಹಿಡಿಯಬೇಕಾದ ಪರಿಸ್ಥಿತಿ ಎದುರಾಗಲಿದೆ.

Comments are closed.