ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯ ಕೊರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಲಭಿಸಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಎಚ್.ಡಿ.ಕುಮಾರಸ್ವಾಮಿಯವರು ಸಹ ಟ್ವೀಟ್ ಮೂಲಕವೇ ಕೃತಜ್ಞತೆಗಳನ್ನು ಸಲ್ಲಿಸಿದ್ದು, ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ನಿಮಗೆ ತುಂಬಾ ಧನ್ಯವಾದ ನರೇಂದ್ರ ಮೋದಿ ಅವರೇ ಎಂದು ತಿಳಿಸಿದ್ದಾರೆ.
ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಿಸದಿರಲು ಎಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದರು. ಪಕ್ಷದ ಶಾಸಕರು, ಮುಖಂಡರು ದೂರವಾಣಿ ಮೂಲಕ ಶುಭಾಶಯ ಕೋರಿದರು.