ಕರ್ನಾಟಕ

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೋವಿಡ್ ಸಲಹಾ ಸಮಿತಿಯಿಂದ ಗ್ರೀನ್ ಸಿಗ್ನಲ್: ಶಿಕ್ಷಣ ಸಚಿವ ‘ಸುರೇಶ್ ಕುಮಾರ್’ ಹೇಳಿದ್ದೇನು ಗೊತ್ತಾ?

Pinterest LinkedIn Tumblr


ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೋವಿಡ್ ಸಲಹಾ ಸಮಿತಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶೀಘ್ರದಲ್ಲೇ ಸರ್ಕಾರ ಶಾಲೆಗಳನ್ನು ಆರಂಭಿಸಲು ದಿನಾಂಕ ನಿಗದಿ ಮಾಡಲಿದೆ.

ಹೌದು. ಕೋವಿಡ್ ಸಲಹಾ ಸಮಿತಿ ಆಧರಿಸಿ ಕಳೆದ 10 ತಿಂಗಳಿನಿಂದ ಬಂದ್ ಆಗಿರುವ ಶಾಲೆಗಳನ್ನು ಶೀಘ್ರದಲ್ಲಿಯೇ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈಗಾಗಲೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ ಶಾಲೆಗಳ ಆರಂಭ ಮಾಡಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಯಾವ ಯಾವ ತರಗತಿಗಳನ್ನು ಯಾವ ದಿನದಲ್ಲಿ ಪ್ರಾರಂಭಿಸಬೇಕು.ಪ್ರಾರಂಭಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ., ಇದಕ್ಕೆ ಸಂಬಂಧಪಟ್ಟಂತೆ ಎಸ್ ಒ ಪಿ ಗಳನ್ನು ಈಗಾಗಲೇ ಸಿದ್ದಪಡಿಸಲಾಗಿದ್ದು, ಸಿಎಂ ಜೊತೆ ಚರ್ಚಿಸಿ ಶಾಲಾರಂಭಕ್ಕೆ ಮಹೂರ್ತ ಫಿಕ್ಸ್ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಮೊದಲು ಎಸ್ ಎಸ್ ಎಲ್ ಸಿ ದ್ವಿತೀಯ ಪಿಯುಸಿ ತರಗತಿ ಆರಂಭ ಮಾಡಲಾಗುವುದು, ಬಳಿಕ ಉಳಿದ ತರಗತಿಗಳ ಆರಂಭ ಮಾಡುವ ಬಗ್ಗೆ ನಿರ್ಧರಿಸಲಾಗುವುದು. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Comments are closed.