ಕರ್ನಾಟಕ

ನಮ್ಮ ಪಕ್ಷವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ; ಸಿದ್ದರಾಮಯ್ಯಗೆ ದೇವೇಗೌಡ

Pinterest LinkedIn Tumblr


ಬೆಂಗಳೂರು; ಕಾಂಗ್ರೆಸ್ ಪಕ್ಷದ ಮೇಲೆ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, “ರಾಜಕಾರಣದಲ್ಲಿ ಸೋಲು ಗೆಲುವು ಮಾಲೂಲಿ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಸಹ ತೆನೆ ಹೊತ್ತ ಮಹಿಳೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ. ದೇವೇಗೌಡ ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ” ಎಂದು ಕಿಡಿಕಾರಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಆ ಎಲ್ಲಾ ಪ್ರಶ್ನೆಗಳಿಗೂ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟ ಉತ್ತರ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿರುವ ಹೆಚ್.ಡಿ. ದೇವೇಗೌಡ, “ತೆನೆ ಹೊತ್ತ ಮಹಿಳೆ ಬಗ್ಗೆ ಈ ರೀತಿ ಮಾತಾನಾಡುವುದು ಸರಿಯಲ್ಲ. ಜೆಡಿಎಸ್ ಪಕ್ಷವನ್ನ ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಸೋಲು ಗೆಲುವು ಮಾಮೂಲಿ. ನಾನು ಕಾಂಗ್ರೆಸ್ ಬಗ್ಗೆ ಮಾತಾಡಿದ್ರೆ ತುಂಬಾ ಮಾತಾಡ್ತೀನಿ. ಕಾಂಗ್ರೆಸ್ ಬಗ್ಗೆ ನಂಗೆ ಗೊತ್ತಿದೆ. ನಮ್ಮ ಪಕ್ಷದ ಬಗ್ಗೆ ಮಾತಡೊರಿಗೆ ಹೇಳ್ತಿನಿ. ಜೆಡಿಎಸ್ ಬಗ್ಗೆ ಲಘುವಾಗಿ ಮಾತಡಬೇಡಿ.

ಜೆಡಿಎಸ್​ಗೆ ಯಾರಿಂದ ಏನೂ ಮಾಡೋಕೆ ಆಗಲ್ಲ. ಜೆಡಿಎಸ್ ನಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಮಾತ್ರ ಅಲ್ಲ. ಪಕ್ಷ ಮುನ್ನಡೆಸಲು ಇನ್ನು ಅನೇಕ ನಾಯಕರು ಇದ್ದಾರೆ. ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ರಿ ಏನಾಯ್ತು? ಹಾಗಾದ್ರೆ 130 ಸೀಟು ಇದ್ದದ್ದೂ 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು ನಗರಸಭೆ ಚುನಾವಣೆ ಗೆಲ್ಲೋಕೆ ಆಗಲಿಲ್ಲ, ಇದು ಆನಂದವಾ ನಿಮಗೆ?. ಎಲ್ಲದಕ್ಕೂ ತೆರೆ ಎಳೆಯುತ್ತಿದ್ದೇನೆ.

ಜೆಡಿಎಸ್ ಮನೆ ಅಲುಗಾಡಿಸಲು ಸಾಧ್ಯವಿಲ್ಲ. ಈತರ ಮಾತಾಡಿ ಯಾವಾಗ್ಯಾವಾಗ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದ್ರು ಅಂತಾ ಗೊತ್ತಿದೆ. ಸಿದ್ದು, ಖರ್ಗೆ, ಮುನಿಯಪ್ಪ, ಗುಲಾಂ ನಬಿ ಎಲ್ಲಾರು ಬಂದಿದ್ದು ಏಕೆ? ಮಾತನಾಡುವಾಗ ಕಿಂಚಿತ್ತಾದ್ರೂ ವಾಸ್ತವ ಘಟನೆ ಬಗ್ಗೆ ಮಾತಾಡಬೇಕು. ಜೆಡಿಎಸ್ ಪಕ್ಷ ನನ್ನಿಂದಾನೇ ಉಳಿಯಬೇಕಾ, ಪಕ್ಷದಲ್ಲಿ ಇನ್ನೂ ಇದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್​ ಗಲಾಟೆಎ ಕುರಿತು ಮಾತನಾಡಿ ಕಾಂಗ್ರೆಸ್​ ವಿರುದ್ಧ ಆರೋಪಿಸಿರುವ ದೇವೇಗೌಡ, “ಭಾಪತಿ ಅವರೇ ರಾಜೀನಾಮೆ ಕೊಡಲು ಸಿದ್ದವಿದ್ದರು. ಆದರೆ, ಅವರ ಪಕ್ಷದವರೇ ಕೊಡಬೇಡಿ ಅಂತ ಹೇಳಿದ್ದಾರೆ. ಏಕೆಂದರೆ ನನ್ನ ಟೆಸ್ಟ್ ಮಾಡಬೇಕು ಅಂತೆ.. ನನ್ನ ಸೆಕ್ಯೂಲರ್ ಚೇಕ್ ಮಾಡಬೇಕ ನೀವು? ಪಾಪ ಸಭಾಪತಿ ಈಗ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ನನ್ನ ಟೆಸ್ಟ್ ಮಾಡೊಕ್ಕೆ ಈ ನಾಟಕ ಮಾಡಿದ್ದಾರೆ. ಗೋದ್ರಾ ಘಟನೆ ನಡೆದಾಗ ನಾನು ಗುಜರಾತ್ ಗೆ ಹೋಗಿದ್ದೆ ಇವರಲ್ಲಿ ಯಾರು ಹೋಗಿದ್ರಾ?
ಕಾಂಗ್ರೆಸ್ ನವ್ರು ನನ್ನ ಟೆಸ್ಟ್ ಮಾಡ್ತಾರೆ. ಜೀವನದಲ್ಲಿ ಹೋರಾಟ ಮಾಡಿ ಈ ಹಂತಕ್ಕೆ ಬಂದಿದ್ದೇನೆ. ಕಾಂಗ್ರೆಸ್ ನಡವಳಿಕೆ ಗೊತ್ತಿದೆ ನಂಗೆ. ಸಾಫ್ಟ್ ಹಿಂದುತ್ವ ಅಂತ ಗುಜರಾತ್ ಎಂಪಿಗಳು ಹೇಳ್ತಾರೆ. ಕಾಂಗ್ರೆಸ್ ನ ಸಾಫ್ಟ್,ಹಾರ್ಡ್ ಹಿಂದುತ್ವ ಗೊತ್ತಿಲ್ಲ ನಮಗೆ ಇದೆಲ್ಲಾ ಕಾಂಗ್ರೆಸ್ ನ ನಾಟಕ. ಹೊರಟ್ಟಿ ಸೀನಿಯರ್ ಲೀಡರ್, ಅವ್ರನ್ನ ಮುಂದಿಟ್ಟುಕೊಂಡು ಆಟ ಆಡ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments are closed.