ಕರ್ನಾಟಕ

ಇಂದು ಗ್ರಾ.ಪಂ ಚುನಾವಣೆ ಫಲಿತಾಂಶ ಪ್ರಕಟ

Pinterest LinkedIn Tumblr


ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು, ಇಂದು ಗ್ರಾಮಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದಲ್ಲಿ 5,728 ಗ್ರಾಮಪಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆದಿದ್ದು, ನಾಳೆ ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ತಡರಾತ್ರಿಯವರೆಗೆ ವೇಳೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ.

ಗ್ರಾಮ ಪಂಚಾಯತ್ ಮತ ಎಣಿಕೆ ನಡೆಯುವ ತಾಲೂಕು ಕೇಂದ್ರಗಳಲ್ಲಿ ಡಿ. 29 ರ ಮಧ್ಯರಾತ್ರಿಯಿಂದ ಡಿ.30 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ . ಮತ ಪೆಟ್ಟಿಗೆ ಇಟ್ಟಿರುವ ಸ್ಥಳಗಳಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Comments are closed.