ಕರ್ನಾಟಕ

ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಂಕ್ರಾಂತಿ ಗಿಫ್ಟ್: ಜ.13 ಅಥವಾ14ಕ್ಕೆ ಸಂಪುಟ ವಿಸ್ತರಣೆ- ಸಿಎಂ ಬಿ.ಎಸ್.ವೈ

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಯಶಸ್ವಿಯಾಗಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ದೂರವಾಣಿ ಕರೆ ಬಂದಿದೆ. ಜನವರಿ 13ಅಥವಾ14ಕ್ಕೆ ರಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳುರಿನಲ್ಲಿ ಸೋಮವಾರ ಬೆಳಿಗ್ಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ರಾಜ್ಯ ಉಸ್ತುವಾರಿಯವರ ಸಮಯ ಪಡೆದು ಅವರ ಉಪಸ್ಥಿತಿಯಲ್ಲಿ ಪ್ರಮಾಣ ವಚನ ಪ್ರಕ್ರಿಯೆ ನಡೆಯಲಿದೆ. ಏಳು ಮಂದಿಗೆ ಸ್ಥಾನ ನೀಡಲಾಗುತ್ತೆ ಎಂದರು.

ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಪಕ್ಕಾ ಎನ್ನಲಾಗಿದೆ. ಇವರೊಂದಿಗೆ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸುನಿಲ್ ಕುಮಾರ್ ಮತ್ತು ತಿಪ್ಪಾರೆಡ್ಡಿ ಹಾಗೂ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

Comments are closed.