ಕರ್ನಾಟಕ

ಜ.15ರಿಂದ ಕಾಲೇಜುಗಳು ಆರಂಭ: ಹಾಸ್ಟೆಲ್ ಕೂಡ ಓಪನ್- ಡಿಸಿಎಂ ಅಶ್ವಥ್ ನಾರಾಯಣ್

Pinterest LinkedIn Tumblr

ಬೆಂಗಳೂರು: ಕರ್ನಾಟಕದ ಪದವಿಪೂರ್ವ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕೋರ್ಸ್‌ಗಳ ಎಲ್ಲಾ ವಿದ್ಯಾರ್ಥಿಗಳಿಗೆ ಜನವರಿ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.

ಇಂದು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಅಂತಿಮ ವರ್ಷದ ಆಫ್‌ಲೈನ್ ತರಗತಿಗಳು ಈಗಾಗಲೇ ಯಶಸ್ವಿಯಾಗಿ ನಡೆಯುತ್ತಿವೆ ಮತ್ತು ಇತರ ತರಗತಿಗಳು ಸಹ ಈ ತಿಂಗಳು 15 ರಿಂದ ಆರಂಭವಾಗಲಿವೆ ಎಂದರು.

ಎಲ್ಲಾ ಹಾಸ್ಟೆಲ್‌ಗಳು ಸಹ ತೆರೆಯಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಗಳನ್ನು ಪುನರಾರಂಭಿಸಲಾಗುವುದು ಎಂದು ಅವರು ಹೇಳಿದರು, ಕೋವಿಡ್-19 ಮಾರ್ಗಸೂಚಿ ಪ್ರಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾರ್ಗಸೂಚಿಗಳನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನೀಡಲಾಗಿದೆ ಎಂದರು.

ಕಾಲೇಜು ಗ್ರಂಥಾಲಯಗಳು, ಕ್ಯಾಂಟೀನ್‌ಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡೆಗಳಿಗೂ ಸಹ ಮಾರ್ಗಸೂಚಿಗಳನ್ನು ರೂಪಾಸಿಲಾಗಿದೆ. ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ತರಗತಿಗಳನ್ನು ಸಹ ತೆರೆಯಲಾಗುವುದು. ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶಿಬಿರಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

Comments are closed.