ಕರ್ನಾಟಕ

ಧಾರವಾಡ ಬಳಿ ಭೀಕರ ಅಪಘಾತಕ್ಕೆ ದಾವಣೆಗೆರೆಯ 11 ಮಂದಿ ಬಲಿ

Pinterest LinkedIn Tumblr

ಧಾರವಾಡ: ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 11 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಟ್ಟಿಗಟ್ಟಿ ಬಳಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಅಪಘಾತದ ಭೀಕರತೆಗೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,

ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

Comments are closed.