ಕರ್ನಾಟಕ

ರಾಜಭವನ ಮುತ್ತಿಗೆ ಯತ್ನ: ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

Pinterest LinkedIn Tumblr

ಕುಂದಾಪುರ: ಕೇಂದ್ರ ಸರಕಾರ ಜಾರಿಗೆ ತಂದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗ್ಗೆ ಮೆಜೆಸ್ಟಿಕ್​ನಿಂದ ಆರಂಭವಾದ ಕಾಂಗ್ರೆಸ್ ರ್ಯಾಲಿ ರಾಜಭವನದತ್ತ ಹೊರಟಿದ್ದು‌ ರಾಜಭವನ ಮುತ್ತಿಗೆ ಹಾಕಲು ಹೊರಟ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ. ಪರಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಮಹಾರಾಣಿ ಕಾಲೇಜ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದು ಅವರನ್ನೆಲ್ಲಾ ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು.

ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಹೀಗಾಗಿ ಬೆಂಗಳೂರು–ಮೈಸೂರು ಹೆದ್ದಾರಿ, ಆನಂದರಾವ್‌ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

Comments are closed.