ಕರ್ನಾಟಕ

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು

Pinterest LinkedIn Tumblr

ನವದೆಹಲಿ: ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ.

ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು.

ಚಿತ್ರರಂಗದ ಕೆಲ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದವರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 4ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು.

ಇಷ್ಟು ತಿಂಗಳು ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

 

Comments are closed.