ಕರ್ನಾಟಕ

ಸಂವಿಧಾನದ ಸದಾಶಯಗಳನ್ನು ಪಾಲಿಸಿ, ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ: ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ರಾಜ್ಯದಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು 72ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದು ರೈತರಿಂದ ಪ್ರತಿಭಟನೆ ಕೂಡ ಇರುವುದರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಣೆ‌ ಮಾಡಲು ಸರ್ಕಾರ ನಿರ್ಧರಿಸಿದೆ. 500 ಜನರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಪ್ರವೇಶ ನೀಡಲಾಗುವುದು. ಮಾಣಿಕ್ ಷಾ ಮೈದಾನದ ಸುತ್ತ 70ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

Comments are closed.