ಕರ್ನಾಟಕ

ದೆಹಲಿಯ ಕೆಂಪು ಕೋಟೆಗೆ ನುಗ್ಗಿದವರು ರೈತರಲ್ಲ, ಭಯೋತ್ಪಾಕರು: ಸಚಿವ ಬಿ.ಸಿ ಪಾಟೀಲ್

Pinterest LinkedIn Tumblr

ಕೊಪ್ಪಳ: ದೆಹಲಿಯ ಕೆಂಪು ಕೋಟೆಗೆ ನುಗ್ಗಿದವರು ರೈತರಲ್ಲ. ಭಯೋತ್ಪಾಕರು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಚಿವರು, ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಘಟನೆಯ ಹಿಂದೆ ರೈತರ ವೇಷದಲ್ಲಿ ಕಾಂಗ್ರೆಸ್ ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರು ಇದ್ದಾರೆ ಎಂದು ಬಿ.ಸಿ ಪಾಟೀಲ್ ಆರೋಪಿಸಿದರು.

ಭಾರತೀಯ ಧ್ವಜ ಮತ್ತು ಕೆಂಪು ಕೋಟೆಗೆ ವಿಶೇಷ ಸ್ಥಾನಮಾನ ಇದ್ದು, ಸಾಂವಿಧಾನಿಕ ಪಾವಿತ್ರ್ಯವನ್ನು ಹೊಂದಿದೆ. ವಿಶೇಷವಾಗಿ ಗಣರಾಜ್ಯೋತ್ಸವದಂದು ಅವಮಾನಿಸುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಮತ್ತು ಇದು ಅವರ ಸಂಸ್ಕೃತಿ ಅಲ್ಲ ಎಂದಿದ್ದಾರೆ.

ಕಾಂಗ್ರೆಸ್ ಸಹಾಯದಿಂದ, ರೈತರ ವೇಷದಲ್ಲಿರುವ ಭಯೋತ್ಪಾದಕರು ಮುಂದಿನ ದಿನಗಳಲ್ಲಿ ರಾಷ್ಟ್ರದ ಗಡಿಯಲ್ಲೂ ಸೈನಿಕರ ಮೇಲೆ ದಾಳಿ ಮಾಡಬಹುದು ಎಂದು ಬಿಸಿ ಪಾಟೀಲ್ ಹೇಳಿದ್ದಾರೆ.

Comments are closed.