ಕರ್ನಾಟಕ

ಸಿಎಂ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ N.R ಸಂತೋಷ್‌ಗೆ ಎದುರಾಯ್ತು ಸಂಕಷ್ಟ..!

Pinterest LinkedIn Tumblr

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿರುವ ಎನ್.ಆರ್ ಸಂತೋಷ್​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾಜಿ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಯತ್ನ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣವನ್ನು ರದ್ದುಕೋರಿ ಎನ್.ಆರ್. ಸಂತೋಷ್ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್​ ಅವರಿದ್ದ ಏಕಸದಸ್ಯ ಪೀಠ ಸಂತೋಷ್ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ವೇಳೆ ತಮ್ಮ ಪರ ಸ್ವತಃ ವಿನಯ್ ವಾದ ಮಂಡಿಸಿದ್ದರು. ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದನ್ನು ಪ್ರಶ್ನಿಸಿ ಎನ್.ಆರ್ ಸಂತೋಷ್​ ಅರ್ಜಿ ಸಲ್ಲಿಸಿದ್ದರು.

Comments are closed.