ಕರ್ನಾಟಕ

ರಾಜ್ಯದಲ್ಲಿ ಕೊರೋನಾ ಅಬ್ಬರ; ಮಂಗಳವಾರ 395 ಪಾಸಿಟಿವ್ ಪ್ರಕರಣ ಪತ್ತೆ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 395 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,40,170ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,223ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 199 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,286ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 412 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,22,004ಕ್ಕೆ ಏರಿಕೆಯಾಗಿದೆ. ಇನ್ನು 5924 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 148 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.