ಕರ್ನಾಟಕ

ರಾಜ್ಯದ ಎಲ್ಲಾ ಕಲ್ಲು ಕ್ವಾರಿ ಸರ್ವೇ ನಡೆಸಿ ವರದಿ ಸಲ್ಲಿಸಿ-ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Pinterest LinkedIn Tumblr

ಬೆಂಗಳೂರು: ಶಿವಮೊಗ್ಗ ಕಲ್ಲು ಕ್ವಾರಿಯಲ್ಲಿ ಇತ್ತೀಚೆಗೆ ನಡೆದ ಜಿಲೆಟಿನ್ ಸ್ಫೋಟ ದುರಂತದ ಬಳಿಕ ಇದೀಗ ರಾಜ್ಯದಲ್ಲಿರುವ ಎಲ್ಲಾ ಕಲ್ಲು ಕ್ವಾರಿಗಳ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಸಾರ್ವಜನಿಕ ಹಿತಾಸಕ್ತಿ ದೂರೊಂದರ ವಿಚಾರಣೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಸೂಚನೆ ನೀಡಿದ್ದು ಕಲ್ಲು ಕ್ವಾರಿಗಳಲ್ಲಿ ನಿಯಮ ಪಾಲನೆ ಸಮರ್ಪಕವಾಗಿ ಆಗುತ್ತಿದೆಯಾ… ನಿಯಮ ಪಾಲಿಸದ ಕ್ವಾರಿಗಳ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದೆ.

ಕ್ವಾರಿಗಳ ಬಗೆಗೆ ಸರ್ಕಾರ ಡ್ರೋನ್ ಸಮೀಕ್ಷೆ ನಡೆಸುವುದಾಗಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಾಧೀಶ ಎ.ಎಸ್. ಓಕಾ ಅವರನ್ನೊಳಗೊಂಡ ಪೀಠ ಈ ಸೂಚನೆ ನೀಡಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಿ ಆದೇಶಿಸಿದೆ.

 

Comments are closed.