ಕರ್ನಾಟಕ

ರಾಜ್ಯದಲ್ಲಿ ಕೊರೋನಾ; 366 ಪಾಸಿಟಿವ್: ಸೋಂಕಿತರ ಸಂಖ್ಯೆ 9,43,212ಕ್ಕೆ ಏರಿಕೆ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 366 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,43,212ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,241ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 195 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,00,887ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 513 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,25,167ಕ್ಕೆ ಏರಿಕೆಯಾಗಿದೆ. ಇನ್ನು 5,785 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 143 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.