
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ದುರುಳರು ಅತ್ಯಾಚಾರವೆಸಗಿದ ಘಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಆಣೂರು ಕಲ್ಲುಗುಡ್ಡೆಯಲ್ಲಿ 8 ನೇ ತರಗತಿ ಓದುತ್ತಿದ್ದ 13 ವರ್ಷದ ಬಾಲಕಿ ಮೇಲೆ 7ಕ್ಕೂ ಹೆಚ್ಚು ಯುವಕರು ಅತ್ಯಾಚಾರ ಎಸಗಿದ್ದಾರೆ.
ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಆರೋಪಿಗಳು ಅತ್ಯಾಚಾರವೆಸಗಿದ್ದರು.
ಪ್ರಮುಖ ಆರೋಪಿ ಸಂದೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Comments are closed.