ಕರ್ನಾಟಕ

ರಾಮಮಂದಿರಕ್ಕೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಭೇದವಿಲ್ಲದೆ ಪ್ರತೀಯೊಬ್ಬರೂ ದೇಣಿಗೆ ನೀಡುತ್ತಿದ್ದು, ಇದನ್ನು ಸಹಿಸದೆ ಕೆಲವರಿಂದ ಗೊಂದಲದ ಹೇಳಿಕೆ: BSY

Pinterest LinkedIn Tumblr

ಶಿವಮೊಗ್ಗ: ರಾಮಮಂದಿರ ದೇಣಿಗೆ ವಿಚಾರ ಸಂಬಂಧ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿರೋಧ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಭೇದವಿಲ್ಲದೆ ಪ್ರತೀಯೊಬ್ಬರೂ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೆ ಕೆಲವರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಇಷ್ಟ ಇದ್ರೆ ದೇಣಿಗೆ ಕೊಡಿ, ಇಲ್ಲವೆಂದರೆ ಸುಮ್ಮಿನಿರಿ. ಯಾರಿಗೂ ಬಲವಂತ ಇಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ವಿವಾದಿತ ಸ್ಥಳ ಬಿಟ್ಟು ಬೇರೆ ಜಾಗದಲ್ಲಿ ಮಂದಿರ ಕಟ್ಟಿದ್ದರೆ ದೇಣಿಗೆ ನೀಡುತ್ತಿದ್ದೆ ಎಂದು ಹೇಳುವ ಮೂಲಕ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಜಾಗದಲ್ಲಿಯೇ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಸಿದ್ದರಾಮಯ್ಯ ಇದೀಗ ನೀಡಿರುವ ಹೇಳಿಗೆ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಸುಪ್ರೀಂಕೋರ್ಟ್ ಅವರ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟರು.

Comments are closed.