ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೂಚನೆ: ಸಿಎಂ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು.

Comments are closed.