ಕರ್ನಾಟಕ

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆಹೋದ 6 ಮಂದಿ ಪ್ರಭಾವಿ ಸಚಿವರು..!

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಹಿರಂಗ ಪ್ರಕರಣ ಬಯಲಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಈ ಹಿಂದೆ ಕಾರಣೀಕರ್ತರಾದ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಯನ್ನು ನಿರ್ಬಂಧಿಸುವಂತೆ ಟಿವಿ ಹಾಗೂ ಪತ್ರಿಕಾ ಮಾಧ್ಯಮವನ್ನು ಪ್ರತಿವಾದಿಗಳನ್ನಾಗಿ ಮಾಡಿಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ಬಗ್ಗೆ ಇಂದು(ಶುಕ್ರವಾರ) ವಿಚಾರಣೆ ನಡೆಸಿದ ನ್ಯಾಯಾಲಯ, ನಾಳೆ ಆದೇಶ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸದ್ಯ ಕೋರ್ಟ್ ಮೊರೆ ಹೋಗಿರುವ ಆರು ಸಚಿವರ ನಡೆ ತೀವ್ರ ಕುತೂಹಲ ಕೆರಳಿಸಿದ್ದು ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದೆ.

Comments are closed.