ಕರ್ನಾಟಕ

ರಮೇಶ್‌ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್‌ ತೆಗೆದುಕೊಳ್ಳಲು ಮುಂದಾದ ದಿನೇಶ್‌ ಕಲ್ಲಹಳ್ಳಿ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ಸಾಮಾಜಿಕ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ವಾಪಸ್‌ ತೆಗೆದುಕೊಳ್ಳಲು ಮುಂದಾಗಿದ್ದಾರೆ. ತಮ್ಮ ವಕೀಲರ ಮೂಲಕ ಪೊಲೀಸ್‌ ಠಾಣೆಗೆ ದೂರು ಹಿಂತೆಗೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಕೇವಲ ಆರೇ ದಿನಗಳಲ್ಲಿ ದಿನೇಶ್‌ ಕಲ್ಲಹಳ್ಳಿ ಯೂಟರ್ನ್‌ ತೆಗೆದುಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಮಾರ್ಚ್‌ 2 ರಂದು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಸಾಮಾಜಿಕ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ಕೆಲಸ ಕೊಡಿಸುತ್ತೇನೆಂದು ಯುವತಿಗೆ ರಮೇಶ್‌ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಕಲ್ಲಹಳ್ಳಿ ದೂರು ನೀಡಿದ್ದರು. ಅದಲ್ಲದೇ ಯುವತಿಯ ಜೊತೆ ರಮೇಶ್‌ ಇದ್ದಾರೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾಗಿ, ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆದರೆ, ದೂರಿನ ಆಧಾರ ಮೇಲೆ ಪೊಲೀಸರು ತನಿಖೆ ನಡೆಸಿ ಎಫ್‌ಐಆರ್‌ ದಾಖಲಿಸುವುದಕ್ಕೂ ಮುನ್ನವೇ ದಿನೇಶ್‌ ಕಲ್ಲಹಳ್ಳಿ ತಮ್ಮ ದೂರನ್ನು ವಾಪಸ್‌ ತೆಗೆದುಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ತಮ್ಮ ವಕೀಲರ ಮೂಲಕ ಪೊಲೀಸ್‌ ಠಾಣೆಗೆ ದೂರು ಹಿಂತೆಗೆತದ ಪತ್ರ ಕಳಿಸಿದ್ದಾರೆ. ದೂರು ಹಿಂತೆಗೆದುಕೊಳ್ಳಲು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಕಾರಣ ಎಂದು ದಿನೇಶ್‌ ಕಲ್ಲಹಳ್ಳಿ ಹೇಳಿದ್ದಾರೆ.

Comments are closed.