ಕರ್ನಾಟಕ

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್’ನಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: 2021-2022ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೂ ಸಾಲ ನೀಡಲಾಗುತ್ತದೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್‌ ಮಾರುಕಟ್ಟೆ ಒದಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ ರೂ.2.5 ಕೋಟಿ. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಪಾಸ್ ನೀಡಲಾಗುತ್ತದೆ. ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್ ನೀಡಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೆ, ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಿದ್ದು, ಮಹಿಳಾ ಉದ್ಯಮಿಗಳಿಗೆ ಹೊಸ ಯೋಜನೆ ತರಲಿದ್ದೇವೆ ಎಂದು ತಿಳಿಸಿದ್ದಾರೆ.

Comments are closed.