ಕರ್ನಾಟಕ

ಮದ್ಯಪ್ರಿಯರಿಗೆ ಸಿಹಿಸುದ್ದಿ; ಬಜೆಟ್ ನಲ್ಲಿ ಮದ್ಯದ ಮೇಲಿನ ತೆರಿಗೆ ಹೆಚ್ಚಳವಿಲ್ಲ

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಲಾಕ್ ಡೌನ್ ನಂತ್ರ ಉಂಟಾದಂತ ಆರ್ಥಿಕ ಸಂಕಷ್ಟದ ಸಲುವಾಗಿ ತೆರಿಗೆ ಸಂಗ್ರಹಣೆ ಮೂಲಕ ಬೊಕ್ಕಸ ತುಂಬಿಸಿಕೊಳ್ಳುವ ಪ್ಲಾನ್ ಬಜೆಟ್ ನಲ್ಲಿ ಘೋಷಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೊರೋನಾ ಸಂಕಷ್ಟದಿಂದಾಗಿ ಈ ಬಾರಿ ಯಾವುದೇ ತೆರಿಗೆ ಏರಿಕೆಯಿಲ್ಲ ಎಂಬುದಾಗಿ ಘೋಷಿಸಿದ್ದಾರೆ. ಈ ಮೂಲಕ ಮದ್ಯಪ್ರಿಯರಿಗೆ ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಪೆಟ್ರೋಲ್ ಮತ್ತು ಡೀಸೆಲ್ ಗಳ ಮೇಲೆ ವಿಧಿಸುವ ಕರ್ನಾಟಕ ಮಾರಾಟ ತೆರಿಗೆ ಸೇರಿದಂತೆ ಯಾವುದೇ ತೆರಿಗೆಯನ್ನು 2021-22ನೇ ಸಾಲಿನಲ್ಲಿ ಹೆಚ್ಚಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಘೋಷಿಸಿದರು.

ಅಲ್ಲದೇ 2021-22ನೇ ಆರ್ಥಿಕ ವರ್ಷಕ್ಕೆ ಅಬಕಾರಿ ಇಲಾಖೆಗೆ 24,580 ಕೋಟಿ ರೂ ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ ಪಡಿಸಲಾಗಿದೆ ಎಂಬುದಾಗಿ ತಿಳಿಸಿದ ಅವರು, ಮದ್ಯದ ಮೇಲಿನ ತೆರಿ(Tax)ಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳುವ ಮೂಲಕ, ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ನೀಡಿದರು.

Comments are closed.