ಕರ್ನಾಟಕ

ಲಾಕ್ ಡೌನ್, ಕರ್ಫ್ಯೂ ಜಾರಿ ಮಾಡಲ್ಲ, ಜನರೇ ಸೂಕ್ತ ಮಾರ್ಗಸೂಚಿಗಳನ್ನು ಪಾಲಿಸಬೇಕು: ಯಡಿಯೂರಪ್ಪ

Pinterest LinkedIn Tumblr

i

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌, ಸೀಲ್‌ಡೌನ್‌, ನೈಟ್‌ ಕರ್ಫ್ಯೂ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು, ಸಾಮಾಜಿಕ ಅಂತರ ಮಾಸ್ಕ್ ಕಡ್ಡಾಯವಾಗಿದೆ. ಜನರು ಯಾವುದೇ ರೀತಿಯಲ್ಲಿ ಅತಂಕಕ್ಕೆ ಒಳಗಾಗೋದು ಬೇಡ. ಕೊರೊನಾ ಬಗ್ಗೆ ಭಯ ಸೃಷ್ಟಿಸುವುದು ಬೇಡ. ಎಲ್ಲರೂ ಲಸಿಕೆ ಪಡೆಯಬೇಕು.. ಕೋವಿಡ್-19 ನಿಯಂತ್ರಿಸಲು ಪರೀಕ್ಷೆ ಹೆಚ್ಚಿಸುವಂತೆ ಪಿಎಂ ಸೂಚನೆ ನೀಡಿದ್ದಾರೆ. ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಟೆಸ್ಟ್ ಹೆಚ್ಚಿಸಲು ಹಾಗೂ ಸಿನಿಮಾ ಥಿಯೇಟರ್‌ಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಸಿಎಂ ತಿಳಿಸಿದರು.

ಕರ್ನಾಟಕದ ಕುರಿತಂತೆ ಬೆಂಗಳೂರು, ಕಲಬುರಗಿ ಮತ್ತು ಬೀದರ್ ನಲ್ಲಿ ಕೊರೋನಾ ಹೆಚ್ಚಾಗುತ್ತಿದ್ದು ಈ ಬಗ್ಗೆ ಹೆಚ್ಚು ಗಮನಹರಿಸುವಂತೆ ಸೂಚಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

‘ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾ ಗಡಿಯನ್ನು ಹೊಂದಿರುವ ಕಲಬುರಗಿ, ಬೀದರ್‌ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಈ ಮೂರು ಜಿಲ್ಲೆಗಳತ್ತ ಹೆಚ್ಚು ಗಮನ ಹರಿಸಲು ಮೋದಿ ಅವರು ನಮ್ಮನ್ನು ಕೇಳಿಕೊಂಡರು ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ ಭಯಪಡುವ ಅಗತ್ಯವಿಲ್ಲ. ಯಾವುದೇ ಕರ್ಫ್ಯೂ ಅಥವಾ ರಾತ್ರಿ ಕರ್ಫ್ಯೂ ಜಾರಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವಂತೆ ಮನವಿ ಮಾಡಿದರು.

Comments are closed.