ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ ದಂಪತಿಯನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಹೆಚ್ .ಡಿ. ದೇವೇಗೌಡ ಅವರು, ನನಗೆ ಮತ್ತೆ ನನ್ನ ಹೆಂಡತಿ ಚೆನ್ನಮ್ಮಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಮತ್ತೆ ನನ್ನ ಕುಟುಂಬದವರು ಐಸೋಲೇಟೆಡ್ ಆಗಿದ್ದೇವೆ. ಕಳೆದ ಐದು ದಿನಗಳಿಂದ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಾ ಅವರೆಲ್ಲ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನ್ನ ಹಿತೈಷಿಗಳು ಯಾವುದೇ ಕಾರಣಕ್ಕೂ ಗಾಭರಿಗೊಳ್ಳಬೇಡಿ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
https://twitter.com/H_D_Devegowda/status/1377169411350482946?s=20
ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ನಾನು ಮಾಜಿ ಪ್ರಧಾನಿ ದೇವೇಗೌಡ ದಂಪತಿ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಅವರ ಪತ್ನಿಯ ಆರೋಗ್ಯ ಉತ್ತಮವಾಗಿದೆ ಎಂದು ತಿಳಿದುಬಂದಿದೆ. ಆದಷ್ಟು ಬೇಗ ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.