ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ.
ಯಾವುದೇ ತಪ್ಪನ್ನು ಮಾಡದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಬಿ.ಸಿ. ಪಾಟೀಲ್ ಪ್ರಶ್ನಿಸಿದ್ದಾರೆ.