ಕರ್ನಾಟಕ

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ತಾಯಿ-ಮಗನ ಕೊಂದು ಮನೆ ದರೋಡೆ

Pinterest LinkedIn Tumblr

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ತಾಯಿ, ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಜೆ.ಪಿ.ನಗರದಲ್ಲಿ ತಡರಾತ್ರಿ ನಡೆದಿದೆ.

ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ 75 ವರ್ಷದ ಮಮತಾ ಬಸು ಮತ್ತು ಅವರ ಪುತ್ರ ದೇವ ಬ್ರತಾ ಮೆಹರ(41) ಎಂಬುವವರನ್ನು ಹತ್ಯೆಗೈದಿದ್ದಾರೆ.

ಒರಿಸ್ಸಾ ಮೂಲದ ದೇವ ಬ್ರತಾಗೆ ನಗರ ಕಾಲೇಜುವೊಂದರಲ್ಲಿ ಉಪನ್ಯಾಸಕ ವೃತ್ತಿಯಲ್ಲಿದ್ದು ಕಳೆದ 20 ದಿನಗಳಿಂದ ಜೆಪಿ ನಗರದ ಸಂತೃಪ್ತಿ ನಗರದ ಪುಟ್ಟೇನಹಳ್ಳಿಯಲ್ಲಿ ವಾಸವಾಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ದರೋಡೆಕೋರರು ಮನೆಗೆ ನುಗ್ಗಿ ಇಬ್ಬರನ್ನು ಕೊಲೆ ಮಾಡಿ ಮನೆಯಲ್ಲಿದ್ದ ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಚಿನ್ನಾಭರಣ, ಎಟಿಎಂ ಕಾರ್ಡ್ ದೋಚಿ ಪರಾರಿಯಾಗಿದ್ದಾರೆ.

ತಡರಾತ್ರಿ 1.30 ಆಸುಪಾಸಿನಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ‌. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್ ಮತ್ತು ಶ್ವಾನ ದಳ ಭೇಟಿ ನೀಡಿದೆ. ಅಲ್ಲದೇ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರೋಡೆಕೋರರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Comments are closed.