ಕರ್ನಾಟಕ

ಮನೆ ಬಾಗಿಲು ಮುರಿದು ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಇಬ್ಬರು ಕಳ್ಳರು ಅಂದರ್..!

Pinterest LinkedIn Tumblr

ಮಡಿಕೇರಿ: ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಕಳವು ಮಾಡಿದ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 04/04/2021ರಂದು ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ನಿವಾಸಿ ಪೊಯ್ಯೇಟಿರ ನಂದ ಎಂಬವರ ಮನೆಯಲ್ಲಿ ಯಾರೂ ಇಲ್ಲದೇ ಇದ್ದ ಸಮಯದಲ್ಲಿ ರಾತ್ರಿ ವೇಳೆ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಮನೆಯೊಳಗಡೆ ಕೊಠಡಿಯ ಕಪಾಟಿನಲ್ಲಿದ್ದ ಸುಮಾರು 3 ಲಕ್ಷದ 67 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾರವರ ಮಾರ್ಗದರ್ಶನದಂತೆ ವಿರಾಜಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಿ.ಟಿ.ಜಯಕುಮಾರ್‌ ನಿರ್ದೇಶನದಲ್ಲಿ ತನಿಖೆ ಕೈಗೊಂಡ ವಿರಾಜಪೇಟೆ ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್‌ ರವರ ನೇತೃತ್ವದ ಅಪರಾಧ ಪತ್ತೆ ತಂಡವು ಕಳವು ಪ್ರಕರಣವನ್ನು ಭೇದಿಸಿ ಆರೋಪಿಗಳಾದ ಅರಮೇರಿ ಗ್ರಾಮದ ನಿವಾಸಿ ನಟೇಶ ಹಾಗೂ ಮೈಸೂರು ಜಿಲ್ಲೆಯ ಹುಣಸೂರಿನ ಆಜಾದ್ ನಗರದ ನಿವಾಸಿ ಅಫ್ಸರ್ ಎಂಬವರನ್ನು ಬಂಧಿಸಿ ಅವರಿಂದ ಕಳವು ಮಾಡಲಾದ ರೂ.3,67,000/- ಮೌಲ್ಯದ ಚಿನ್ನಾಭರಣ, ರೂ.29,250/- ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದಾರೆನ್ನಲಾದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದು ಆರೋಪಿಗಳಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್ಐ ಸಿದ್ದಲಿಂಗ ಬಾನಸೆ, ಪಿಎಸ್ಐ ಹೆಚ್.ಎಸ್.ಬೋಜಪ್ಪ, ಎಎಸ್ಐ ಶ್ರೀಧರ್ ಮತ್ತು ಸಿಬ್ಬಂದಿಗಳಾದ ತೀರ್ಥ ಕುಮಾರ್, ರಾಮಪ್ಪ, ರವಿ, ನೆಹರು, ಮುಸ್ತಫಾ, ಚಂದ್ರಶೇಖರ್, ಪ್ರದೀಪ್, ಈರಪ್ಪ ಮತ್ತು ಸಿಡಿಆರ್ ವಿಭಾಗದ ರಾಜೇಶ್, ಗಿರೀಶ್ ಮುಂತಾದವರು ಪಾಲ್ಗೊಂಡಿದ್ದರು.

Comments are closed.