ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

“ಸಿಬಿಎಸ್‌ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ರಾಜ್ಯವು ಏನನ್ನೂ ನಿರ್ಧರಿಸಿಲ್ಲ. ಎಲ್ಲಾ ನಿಯತಾಂಕಗಳನ್ನು ಪರಿಗಣಿಸಿ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.” ಸಚಿವರು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸ್ಪಷ್ತನೆ ನೀಡಿರುವ ಸಚಿವರು “ಸಿಬಿಎಸ್‌ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.

ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.” ಎಂದು ಹೇಳಿದ್ದಾರೆ.

Comments are closed.