ಕರ್ನಾಟಕ

ಕೊರೋನಾ ಆರ್ಭಟ; ನಿಯಂತ್ರಣಕ್ಕೆ ಬಾರದ ಬೆಂಗಳೂರು: ಅಶೋಕ್ ನೇತೃತ್ವದಲ್ಲಿ ನಡೆಯಲಿದೆ ಸಭೆ

Pinterest LinkedIn Tumblr

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕು ಸ್ಫೋಟ ಉಂಟಾಗಿದೆ. ಬೆಂಗಳೂರಿನಲ್ಲಂತೂ ನಿಯಂತ್ರಣ ಮೀರಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಸಚಿವರು, ಶಾಸಕರು, ಸಂಸದರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಸೋಮವಾರ ಅಪರಾಹ್ನ ನಡೆಯಲಿದೆ.

ಸಭೆಯಲ್ಲಿ ಬೆಂಗಳೂರು ನಗರದ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ವಿಶೇಷ ಕಾರ್ಯ ಯೋಜನೆ, ಕ್ರಮಗಳ ಜಾರಿ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ಜನಪ್ರತಿನಿಧಿಗಳು ನೀಡುವ ಸಲಹೆ, ಸೂಚನೆಗಳನ್ನು ಸರ್ಕಾರ ನಂತರ ಪರಿಶೀಲಿಸಿ ಜಾರಿಗೆ ತರುವ ನಿರೀಕ್ಷೆಯಿದೆ.

ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಸದ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ಸೋಂಕಿನ ನಿಯಂತ್ರಣಕ್ಕೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ನಿನ್ನೆ ಹೇಳಿದ್ದರು.

Comments are closed.