ಕರ್ನಾಟಕ

ಕೋವಿಡ್‌ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರಿನ 6 ಕಡೆ ಭೂಮಿ: ಸಚಿವ ಅಶೋಕ್

Pinterest LinkedIn Tumblr

ಬೆಂಗಳೂರು: ಕೋವಿಡ್‌ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಎಲ್ಲರೂ ಜತೆಯಾಗಿದ್ದೇವೆ. ವಿರೋಧ ಪಕ್ಷದವರು ಆರೋಪಿಸುವಂತೆ ನಮ್ಮಲ್ಲಿ ಯಾವುದೇ ಒಡಕು ಇಲ್ಲ’ ಎಂದು ಅಶೋಕ ಹೇಳಿದರು.

ತಾವರೆಕೆರೆ ಬಳಿ ನಾಲ್ಕು ಎಕರೆ ಜಾಗ ಗುರುತಿಸಲಾಗಿದ್ದು, ಕೋವಿಡ್‍ನಿಂದ ಮೃತಪಟ್ಟ ಹೆಚ್ಚುವರಿ ಶವಗಳ ದಹನಕ್ಕೆ ಆದೇಶಿಸಲಾಗಿದೆ. ಇದೇ ರೀತಿ ಎಲ್ಲಾ ಜಿಲ್ಲಾಕಾರಿಗಳಿಗೂ ಸೂಚನೆ ನೀಡಿದ್ದು, ಗ್ರಾಮದಿಂದ ಒಂದು ಕಿ.ಮೀ.ದೂರದಲ್ಲಿರುವ ಸರ್ಕಾರಿ ಭೂಮಿಯನ್ನು ಕೋವಿಡ್‍ನಿಂದ ಮೃತಪಟ್ಟವರ ಸಂಸ್ಕಾರಕ್ಕೆ ಬಳಸಿಕೊಳ್ಳಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ನಾಲ್ಕೈದು ಕಡೆ ಇಂತಹ ಜಾಗಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದಿಂದ ಶವಗಾರಕ್ಕೆ ಶವಗಳು ಬರುತ್ತಿರುವುದರಿಂದ ಅಂತ್ಯ ಸಂಸ್ಕಾರ ವಿಳಂಬವಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Comments are closed.