ಕರ್ನಾಟಕ

SSLC ಪರೀಕ್ಷೆ ಮುಂದೂಡಿಕೆ: ವಿದ್ಯಾರ್ಥಿಗಳು ವಿಚಲಿತರಾಗಬೇಡಿ- ಸಚಿವ ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ಜೂನ್ 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಕೋವಿಡ್-19 ಹಿನ್ನೆಲೆ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ನಿತ್ಯ ಹೆಚ್ಚುತ್ತಿರುವ ಕೊರೋನಾದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು, ಶಾಲಾ ಸಂಘಟನೆಯವರ ಮುತುವರ್ಜಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ 19 ಎರಡನೇ‌ ಅಲೆ ನಿಯಂತ್ರಣಕ್ಕೆ ಬಂದ ಬಳಿಕದಲ್ಲಿ ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕಿದ್ದು ಪರೀಕ್ಷೆ ಕುರಿತಂತೆ ಯಾವುದೇ
ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

 

Comments are closed.