ಕರ್ನಾಟಕ

ಕೆಎಸ್​ಆರ್​ಟಿಸಿಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಹೆಸರಿಡಲು ಸಂಸದೆ ಸುಮಲತಾ ಅಂಬರೀಷ್ ಮನವಿ

Pinterest LinkedIn Tumblr

ಮಂಡ್ಯ: ಲೊಗೋ ಮತ್ತು ಟ್ರೇಡ್​ಮಾರ್ಕ್​ ಕೇರಳ ರಾಜ್ಯದ ಪಾಲಾದ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್​​ ಸಾರಿಗೆ ಸಂಸ್ಥೆ ಎಂದು ಹೆಸರಿಡುವಂತೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಮನವಿ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು‌ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಲೋಗೊ ಕರ್ನಾಟಕದ ಕೈ ತಪ್ಪಿ, ಕೇರಳ ಪಾಲಾಗಿದೆ. ಕೆಎಸ್​​ಆರ್​ಟಿಸಿ- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಂಬ ಹೆಸರಿನಲ್ಲಿ ಕರ್ನಾಟಕದ ಸಾರಿಗೆ ಬಸ್​ಗಳು ಸಂಚರಿಸುತ್ತಿದ್ದವು. ಮಾತ್ರವಲ್ಲ‌ ಕೇರಳ ರಾಜ್ಯದಲ್ಲೂ ಕೆಎಸ್​ಆರ್​ಟಿಸಿ ಹೆಸರಿನಲ್ಲಿ ಬಸ್​ಗಳ ಸಂಚಾರ ನಡೆಯುತ್ತಿತ್ತು.

ಎರಡೂ ರಾಜ್ಯದ ಸಾರಿಗೆ ಬಸ್​ಗಳು ‘ಕೆಎಸ್ಆರ್​ಟಿಸಿ’ ಎಂಬ ಒಂದೇ ಟ್ರೇಡ್​​​ ಮಾರ್ಕ್ ಬಳಸುತ್ತಿದ್ದವು. 2014ರಲ್ಲಿ ಈ ಟ್ರೇಡ್ ಮಾರ್ಕ್ ಬಳಸದಂತೆ ಕೇರಳಕ್ಕೆ ಕರ್ನಾಟಕ ಸೂಚನೆ ನೀಡಿತ್ತು. ಈ ಬಗ್ಗೆ ಕೇರಳಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು. ಅಷ್ಟೇ ಅಲ್ಲದೆ, ಕೇರಳ ಸರ್ಕಾರ ಟ್ರೇಡ್​ ಮಾರ್ಕ್​ಗಳ ರಿಜಿಸ್ಟ್ರಾರ್​​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಕೇರಳ ಸರ್ಕಾರ ಆ ಸಂದರ್ಭ ಟ್ರೇಡ್ ಮಾರ್ಕ್​ಗಳ ರಿಜಿಸ್ಟ್ರಾರ್​​ಗೆ ಅರ್ಜಿ ಸಲ್ಲಿಸಿತ್ತು. ಸುದೀರ್ಘ 8 ವರ್ಷಗಳಿಂದ ನಡೆದಿದ್ದ ಕಾನೂನು ಹೋರಾಟ ನಡೆದಿತ್ತು. ಕೊನೆಗೆ ಅಂತಿಮವಾಗಿ ಕೇರಳಕ್ಕೆ ಕೆಎಸ್ಆರ್ಟಿಸಿ ಟ್ರೇಡ್​ಮಾರ್ಕ್ ಲಭಿಸಿದೆ.

Comments are closed.