ಕರ್ನಾಟಕ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ; ಹಂಗಾಮಿ ಸಿಎಂ ಆಗಿ ಮುಂದುವರಿಕೆ

Pinterest LinkedIn Tumblr

ಬೆಂಗಳೂರು: ಎರಡು ವರ್ಷದ ಸಂಭ್ರಮಾಚರಣೆ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸ್ವೀಕರಿಸಿದ ರಾಜ್ಯಪಾಲರು ಅಂಗೀಕರಿಸಿದರು. ಹೊಸ ಸಿಎಂ ಆಗುವರೆಗೂ ಯಡಿಯೂರಪ್ಪನವರು ಹಂಗಾಮಿ ಸಿಎಂ ಆಗಿರಲಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆದ್ರೂ ಪೂರ್ಣವಾಧಿಯನ್ನು ಪೂರೈಸಲು ಆಗಿಲ್ಲ. 2011ರ ಜುಲೈನಲ್ಲಿಯೂ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನೂ ಯಡಿಯೂರಪ್ಪನವ ರಾಜೀನಾಮೆ ಬಳಿಕ ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ.

ಸಿಎಂ ರಾಜೀನಾಮೆ ಬೆನ್ನಲ್ಲೇ ಸಂಪುಟ ಪುನಾರಚನೆ ಆಗಲಿದೆ ಎನ್ನಲಾಗುತ್ತಿದೆ. ಜೊತೆಗೆ ನಾಲ್ಕನೇ ಡಿಸಿಎಂ ನೇಮಕ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಮುಂದಿನ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈಗಾಗಲೇ ದೆಹಲಿ ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಹೆಸರು ಘೋಷಣೆಗೆ ಮುಹೂರ್ತ ನಿಗದಿ ಮಾಡುತ್ತಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಪ್ರಹ್ಲಾದ್ ಜೋಶಿ ರಹಸ್ಯ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Comments are closed.