ಕರ್ನಾಟಕ

ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು.

ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್, ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮುಂಜಾನೆ ಬಿಎಸ್ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದರು.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ಆಗಮಿಸಿತ್ತು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಜಭವನಕ್ಕೆ ನೂರಾರು ಅಭಿಮಾನಿಗಳು ಆಗಮಿಸಿದ್ದರು. ಪಾಸ್ ಇಲ್ಲದ ಕಾರಣ ಎಲ್ಲರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗದೇ ನಿರಾಸೆಗೊಂಡರು.

Comments are closed.