ಕರ್ನಾಟಕ

ಪೊಲೀಸ್ ಠಾಣೆಯಲ್ಲಿ ಬರ್ತ್ ಡೇ, ಖಾಸಗಿ ಆಚರಣೆ ಬೇಡ: ಜಾಲತಾಣದಲ್ಲಿ ಬಿಲ್ಡಪ್ ವಿಡಿಯೋ ಹಾಕದಿರಿ: ಡಿಜಿ &ಐಜಿಪಿ‌ ಪ್ರವೀಣ್ ಸೂದ್

Pinterest LinkedIn Tumblr

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಡಿಜಿ ಮತ್ತು ಐಜಿಪಿ ಖಡಕ್ ಆದೇಶ ಹೊರಡಿಸಿದ್ದಾರೆ.

ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಂತವರೊಂದಿಗೆ ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದವರು ಆದೇಶಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ತಾವು ವೈಭವೀಕರಿಸಿಕೊಳ್ಳುವ ವಿಡಿಯೋ ಅಪ್ಲೋಡ್ ಮಾಡಬಾರದು ಎಂದವರು ಹೇಳಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಸೇರಿದಂತೆ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡಬಾರದು ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಯಾಯ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

Comments are closed.