ಕರ್ನಾಟಕ

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್’ಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಐಟಿ..!

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್ ನ ಚಾಮರಾಜಪೇಟೆ​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್​ ಮನೆಯ ಮೇಲೆ ಇಂದು (ಗುರುವಾರ) ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ.

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಮೀರ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Comments are closed.