ಕರ್ನಾಟಕ

ಶಾಲಾ-ಕಾಲೇಜು ಆಗಸ್ಟ್ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಶಾಲಾ-ಕಾಲೇಜುಗಳನ್ನು ಆಗಸ್ಟ್ 23ರಿಂದ ಆರಂಭಿಸಲು ನಿರ್ಧರಿಸಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಎರಡು ಹಂತದಲ್ಲಿ ಶಾಲೆ ಆರಂಭಿಸಲು ನಿರ್ಧರಿಸಲಾಗಿದ್ದು ಅದರಂತೆ ಆಗಸ್ಟ್ 23ರಿಂದ 9, 10, 11, 12ನೇ ತರಗತಿಗಳು ಆರಂಭವಾಗಲಿವೆ.

ಬ್ಯಾಚ್ ವೈಸ್ ಶಾಲೆ ಆರಂಭಿಸಲು ನಿರ್ಧರಿಸಿರುವ ಸರ್ಕಾರ ಮುಂದೆ ಕೊರೋನಾ ತೀವ್ರತೆಯನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪ್ರಾಥಮಿಕ ಶಾಲಾ ಆರಂಭಿಸುವ ಸಂಬಂಧ ಆಗಸ್ಟ್ ಕೊನೆಯ ವಾರಾದಲ್ಲಿ ಸಭೆ ನಡೆಸಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗುತ್ತಿದೆ. ಇನ್ನು ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೆ ಬರಲಿದೆ.

ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ, ಡಾ. ಕೆ. ಸುಧಾಕರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಜ್ಞ ವೈದ್ಯರಾದ ಡಾ.ಸಿ ಎನ್ ಮಂಜುನಾಥ, ಡಾ. ಸುದರ್ಶನ್, ಡಾ. ದೇವಿಪ್ರಸಾದ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Comments are closed.