ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 1,610 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 29,16,927ಕ್ಕೆ ಏರಿಕೆ: 32 ಮಂದಿ ಬಲಿ

Pinterest LinkedIn Tumblr

ಬೆಂಗಳೂರು: ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,610 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,16,927ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,773ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 357 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,30,138ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,640 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,55,862ಕ್ಕೆ ಏರಿಕೆಯಾಗಿದೆ. ಇನ್ನು 24,266 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,47,869 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,610 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.08ಕ್ಕೆ ಇಳಿದಿದೆ.

Comments are closed.