ಕರ್ನಾಟಕ

ರಾಜ್ಯದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ: ಫೇಲಾದ ಓರ್ವ ವಿದ್ಯಾರ್ಥಿ

Pinterest LinkedIn Tumblr

ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಒಂದು ವಿದ್ಯಾರ್ಥಿ ಬೇರೆ ವಿದ್ಯಾರ್ಥಿಯನ್ನು ಪರೀಕ್ಷೆಯನ್ನು ಕಳುಹಿಸಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಹೇಗೆ ಮಾಡ್ತಾರೆ ಪರೀಕ್ಷೆ ಅಂತ ಗೊಂದಲ ಇತ್ತು. ಅಧಿಕಾರಿ ವರ್ಗದವರು ಶ್ರಮಪಟ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿ ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಯಡಿಯೂರಪ್ಪನವರನ್ನು ನೆನಪು ಮಾಡಿಕೊಂಡರು.

ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.

ಎ + ಗ್ರೇಡ್ 1,28,931, ಎ ಗ್ರೇಡ್ 2,50,317, ಬಿ ಗ್ರೇಡ್ 2,87,684, ಸಿ ಗ್ರೇಡ್ 1,13,610 ವಿದ್ಯಾರ್ಥಿಗಳು ಪಾಸ್. ಶೇ.9 ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ.

ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ
ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ
sslc.karnataka.gov.in
kseeb.kar.nic.in
karresults.nic.in

ಫಲಿತಾಂಶ ವೀಕ್ಷಿಸುವುದು ಹೇಗೆ?
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

Comments are closed.