ಕರ್ನಾಟಕ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಜಯದ ನಗು ಬೀರಿದ ಬಿಜೆಪಿ

Pinterest LinkedIn Tumblr

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 31 ವಾರ್ಡ್ ಗಳಲ್ಲಿ ಈಗಾಗಲೇ ಬಿಜೆಪಿಯು ಭರ್ಜರಿ ಗೆಲುವು ಸಾಧಿಸಿದೆ.

(ಸಾಂದರ್ಭಿಕ ಚಿತ್ರ)

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಬಿಜೆಪಿಯಿಂದ 55 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕಾಂಗ್ರೆಸ್‌ನಿಂದ 45, ಜೆಡಿಎಸ್‌ನಿಂದ 11 ಹಾಗೂ ಎಂಇಎಸ್‌ನಿಂದ 21 ಮಂದಿ, ಆಪ್‌, ಪಕ್ಷೇತರರು ಸೇರಿದಂತೆ ಒಟ್ಟು 217 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಇನ್ನು ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಪೈಕಿ ಬಿಜೆಪಿ ಸದ್ಯ 31 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 9, ಪಕ್ಷೇತರರು 13 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ.

25 ವರ್ಷಗಳ ಬಳಿಕ ಬಿಜೆಪಿ ಈ ಬಾರಿ ಬೆಳಗಾಗಿ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಿದ್ದು, ಇದೀಗ ಬಿಜೆಪಿ ಮೊದಲ ಬಾರಿ ಬೆಳಗಾವಿ ಪಾಲಿಕೆಯಲ್ಲಿ ಗೆಲುವು ಸಾಧಿಸಿದೆ.

Comments are closed.