ಕರ್ನಾಟಕ

ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ

Pinterest LinkedIn Tumblr

ಬೆಂಗಳೂರು: ಐಎಎಸ್‌ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಲಾಗಿದ್ದು, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೆ. ಅನಿಲ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿ ಆರ್‌. ವಿಶಾಲ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಸ್‌. ಸೆಲ್ವಕುಮಾರ್‌ ಅವರಿಗೆ ಸಹಕಾರ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೊಣೆಯನ್ನೂ ವಹಿಸಲಾಗಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ವಿ. ಅನ್ಬುಕುಮಾರ್‌, ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಟಿ. ರೇಜು ಅವರನ್ನು ನೇಮಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಜೆ. ರವಿಶಂಕರ್‌ ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರಿಗೆ ಹೆಚ್ಚುವರಿಯಾಗಿ ಅಬಕಾರಿ ಇಲಾಖೆಯ ಆಯುಕ್ತ ಹುದ್ದೆಯನ್ನು ನೀಡಲಾಗಿದೆ.

ಬಿಬಿಎಂಪಿ ವಿಶೇಷ ಆಯುಕ್ತರಾಗಿ (ಕಂದಾಯ) ವಿ. ರಾಮ್ ಪ್ರಶಾಂತ್‌ ಮನೋಹರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾ ನಿರ್ದೇಶಕರಾಗಿ ಪಿ.ಎನ್‌. ರವೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಕಾಡಾ (ಅಚ್ಚುಕಟ್ಟು ಪ್ರದೇಶಾಭಿವೃದ್ಧಿಗಳ ನಿರ್ದೇಶನಾಲಯ) ನಿರ್ದೇಶಕ ಪ್ರಕಾಶ್‌ಕುಮಾರ್‌ ಎಚ್‌.ಎಸ್‌. ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾಗಿ ನೇಮಿಸಲಾಗಿದೆ

Comments are closed.