ಕರ್ನಾಟಕ

ಬೆಂಗಳೂರು ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ; 4-5 ದಿನದಿಂದ ಮೃತದೇಹಗಳೊಂದಿಗಿದ್ದ 3‌ ವರ್ಷದ ಮಗು ಪಾರು

Pinterest LinkedIn Tumblr

ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ.

ಸ್ಥಳೀಯ ಪತ್ರಿಕೆಯ ಸಂಪಾದಕರು, ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಭತ್ತು ತಿಂಗಳು ಮಗುವನ್ನು ಕೂಡ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಕಳೆದ‌‌ ನಾಲ್ಕೈದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಘಟನೆ ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ. ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

Comments are closed.