ಕರ್ನಾಟಕ

ಕೊಡಗು-ಕೇರಳ ಗಡಿಯ ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ದಕ್ಷಿಣ ವಲಯದ ಐಜಿಪಿ ಭೇಟಿ

Pinterest LinkedIn Tumblr

ಮಡಿಕೇರಿ: ಕೊಡಗು-ಕೇರಳ ಗಡಿ ಪ್ರದೇಶದ ಮಾಕುಟ್ಟ ಹಾಗೂ ಕುಟ್ಟ ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಅವರು ಭೇಟಿ ನೀಡಿದರು.

ಐಜಿಪಿ‌ ಅವರು ಗಡಿ ಚೆಕ್ ಪೋಸ್ಟ್ ಪರಿಶೀಲನೆ ನಡೆಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಂದ ತಪಾಸಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಪ್ರಮುಖ ಕೊಡಗು-ಕೇರಳ ಗಡಿಪ್ರದೇಶಗಳಾದ ಮಾಕುಟ್ಟ, ಕುಟ್ಟ ಮತ್ತು ಕರಿಕೆ ಗೇಟ್ ಗಳಲ್ಲಿ ಕೋವಿಡ್ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ.

ಈ ತಪಾಸಣಾ ಕೇಂದ್ರದಲ್ಲಿ ದಿನದ 24 ಗಂಟೆಯೂ ಪೊಲೀಸ್, ರೆವಿನ್ಯೂ ಮತ್ತು ಆರೋಗ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸತ್ತಿದ್ದು, ತಪಾಸಣಾ ಕೇಂದ್ರದ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಹಾಗು ಸಾರ್ವಜನಿಕರನ್ನು ತಪಾಸಣೆ ಮಾಡಿ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಿ ಮಾರ್ಗಸೂಚಿಯಂತೆ ಕ್ರಮಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗು ಪೊಲೀಸ್ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Comments are closed.