ಕರ್ನಾಟಕ

ಬೆಂಗಳೂರಿನ ಅಪಾರ್ಟ್‌ಮೆಂಟ್’ನಲ್ಲಿ ಅಗ್ನಿ ಅವಘಡ; ತಾಯಿ, ಮಗಳು ಸಜೀವ ದಹನ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ಒಂದರ ಒಳಗಡೆ ಇದ್ದ ಇಬ್ಬರು ಸಜೀವ ದಹನಗೊಂಡ ಘಟನೆ ನಗರದ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ದುರಂತದಲ್ಲಿ ಸಾವನ್ನಪ್ಪಿದ ತಾಯಿ ಲಕ್ಷ್ಮೀದೇವಿ (82 ವರ್ಷ), ಪುತ್ರಿ ಭಾಗ್ಯ ರೇಖಾ (59 ವರ್ಷ) ಎಂದು ಗುರುತಿಸಲಾಗಿದ್ದು ಅವರು ಒಂದೆರಡು ದಿನದ ಹಿಂದೆ ಅಮೆರಿಕದಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬಿಟಿಎಂ ಲೇಔಟ್ ನಲ್ಲಿರುವ ದೇವರ ಚಿಕ್ಕನಹಳ್ಳಿಯಲ್ಲಿರುವ ಆಶ್ರಿತ್ ಅಪಾರ್ಟ್ ಮೆಂಟ್ ನ 210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ತಾಯಿ, ಪುತ್ರಿ ಮೃತದೇಹ ಪತ್ತೆಯಾಗಿದೆ. ಅಲ್ಲದೆ ಅಗ್ನಿ ಅವಘಡದಲ್ಲಿ ಭೀಮಸೇನ್‌ ಎಂಬುವವರಿಗೆ ಗಾಯಗೊಂಡಿದ್ದಾರೆ. ಗಾಯಾಳು ಭೀಮಸೇನ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮಸೇನ್‌ ತಲೆ, ಕೈ-ಕಾಲುಗಳಲ್ಲಿ ಸುಟ್ಟಗಾಯ ಆಗಿದೆ.

ಈ ಅಗ್ನಿ ದುರಂತಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎಂದು ಶಂಕಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಘಟನೆ ಸಂಭವಿಸಿದ ಶಂಕೆ ಇದೆ. ಪ್ರಾಥಮಿಕ ಮಾಹಿತಿ ಪ್ರಕಾರ ಸಿಲಿಂಡರ್ ಸ್ಫೋಟ ಶಂಕೆ ವ್ಯಕ್ತವಾಗಿದೆ. ಏರಿಯಲ್ ಲ್ಯಾಡರ್ ಪ್ಲಾಟ್​ಫಾರಂ ಮಷೀನ್​ ಬಂದಿದೆ. ಅತ್ಯಂತ ಕ್ಲಿಷ್ಟ ಸಂದರ್ಭದಲ್ಲಿ ಮಾತ್ರ ಈ ಯಂತ್ರ ಬಳಸ್ತೇವೆ. ಅಗ್ನಿಶಾಮಕ ದಳದ 5 ವಾಹನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Comments are closed.