ಕರ್ನಾಟಕ

ಶಾಲೆಯಲ್ಲಿಯೇ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಹೆಡ್ ಮಾಸ್ಟರ್ ಅಮಾನತು..!

Pinterest LinkedIn Tumblr

ಬೆಂಗಳೂರು: ಬೆಂಗಳೂರು ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಗೆ ಮಗುವನ್ನು ದಾಖಲಿಸಲು ಬಂದ ಮಹಿಳೆಯಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಲೋಕೇಶಪ್ಪ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಲೋಕೇಶಪ್ಪ ಎನ್ನುವರು ಪ್ರಭಾರಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಲಿಕೆಯ ಕೋದಂಡ ರಾಮಪುರ ಪ್ರೌಢಶಾಲೆಯಲ್ಲಿ ಮಗುವಿನ ದಾಖಲಾತಿಗೆಂದು ಮಹಿಳೆಯೊಬ್ಬರು ಶಾಲೆಗೆ ಬಂದಿದ್ದ ವೇಳೆ ಮಹಿಳೆಯಿಂದ ಪ್ರೌಢಶಾಲೆಯ ಕಟ್ಟಡದಲ್ಲಿ ಮಸಾಜ್‌ ಮಾಡಿಸಿಕೊಂಡಿರುವ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದವು.

ಈ ಹಿನ್ನೆಲೆ ಲೋಕೇಶಪ್ಪ ರವರನ್ನು ಖುದ್ದು ವಿಚಾರಿಸಿದ್ದು, ಮಸಾಜ್‌ ಮಾಡಿಸಿಕೊಂಡಿರುವುದಾಗಿ ಒಪ್ಪಿದ್ದರು. ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯ ಸರ್ಕಾರಿ ಕಟ್ಟಡವನ್ನು ತಮ್ಮ ಖಾಸಗಿ ಕೆಲಸಕ್ಕೆ ಬಳಸಿಕೊಂಡಿರುವುದು ಸರ್ಕಾರಿ ಕೆಲಸದ ಸಮಯದಲ್ಲಿ ಕರ್ತವ್ಯ ಲೋಪ ಎಸಗಿರುವುದರಿಂದ ನಾಗರೀಕ ನಿಯಮಾವಳಿ ಅನ್ವಯ ಈ ತಕ್ಷಣದಿಂದ ಜಾರಿಗೆ ಬರಲು ಇಲಾಖಾ ವಿಚಾರಣೆ ನಿರೀಕ್ಷಿಸಿ, ಸೇವೆಯಿಂದ ಅಮಾನತ್ತುಪಡಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

Comments are closed.