ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ಸರಣಿ ಸ್ಫೋಟ ದುರಂತ: ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕ ನಿಲ್ಲಿಸಿದ್ದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತರಗುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಮೃತರನ್ನು ಅಸ್ಲಾಂ, ಫಯಾಜ್, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ

ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ, ಸ್ಥಳೀಯರಲ್ಲಿ ತೀವ್ರ ಆತಂಕ ಮನೆಮಾಡಿದೆ.

Comments are closed.