ಕರ್ನಾಟಕ

ಬೆಂಗಳೂರಿನಲ್ಲಿ ಕುಸಿದುಬಿದ್ದ ಮೂರಂತಸ್ತಿನ ಮನೆ: ಮುಂಜಾಗೃತೆಯಿಂದ ತಪ್ಪಿದ ಭಾರೀ ಅನಾಹುತ

Pinterest LinkedIn Tumblr

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದೆ. ಮನೆ ಬೀಳುವ ಭೀಕರ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಸಾಲು ಸಾಲು ಅನಾಹುತಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಮನೆ ಕೊಂಚ ಬಾಗಿತ್ತು. ಆದರೂ ಮನೆ ಮಾಲೀಕರು ಹೆಚ್ಚಾಗಿ ತಲೆ‌‌ಕೆಡಿಸಿಕೊಳ್ಳದೇ ರಿಪೇರಿ ಮಾಡಿಸಿ ಮತ್ತೆ ಬಾಡಿಗೆಗೆ ಕೊಟ್ಟಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೋಮವಾರ ಬೆಳಗ್ಗೆ ಮನೆ ಹಂತಹಂತವಾಗಿ ಕುಸಿಯಲು ಆರಂಭವಾಗಿದ್ದು ತಕ್ಷಣವೇ ಎಚ್ಚೆತ್ತುಕೊಂಡ ಮನೆಯಲ್ಲಿದ್ದ ಬಾಡಿಗೆದಾರರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಆರಂಭಿಸುವ ವೇಳೆಗೆ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.

ಮೆಟ್ರೋ‌ ಕಾಮಗಾರಿ ಕೆಲಸಕ್ಕಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಕೆಲ ಸಮಯ ಮೊದಲು ಜನರನ್ನು ತೆರಳಿದ್ದರಿಂದ ಸಂಭವ್ಯ ಅವಘಡ ತಪ್ಪಿದೆ. ಈ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ.

Comments are closed.