ಕರ್ನಾಟಕ

‘ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿರುವುದು ಬಿಜೆಪಿ ಸರಕಾರನಾ? ತಾಲಿಬಾನಿಗಳದ್ದಾ?’: ಮಾಜಿ ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ಮಂಗಳೂರು: ರಾ.ಹೆ.66ರ ಸುರತ್ಕಲ್-ಎನ್‌ಐಟಿಕೆ ಸಮೀಪದ ಟೋಲ್‌ಗೇಟ್ ಬಳಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ ಅವರು ‘ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ಅಥವಾ ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆ.26ರಂದು ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ರಾ.ಹೆ.66ರ ಸುರತ್ಕಲ್-ಎನ್‌ಐಟಿಕೆ ಸಮೀಪದ ಟೋಲ್‌ಗೇಟ್ ಬಳಿ ತಂಡವೊಂದು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿತ್ತು ಎನ್ನಲಾಗಿದ್ದು ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆ ಬಳಿಕ ಪೊಲೀಸ್ ಇಲಾಖೆಯು ಸೋಮವಾರ ರಾತ್ರಿ ಐವರನ್ನು ಬಂಧಿಸಿತ್ತು.

Comments are closed.